ವರುಷ ಮಾತ್ರವಲ್ಲ ಚಿಂತನೆಗಳೂ ಹೊಸತಾಗಲಿ : ಪ್ರಕಾಶ್ ಪಿ ಎಸ್

Upayuktha
0

 


ಮಂಗಳೂರು : ಯುಗಾದಿ ಯುಗದ ಆದಿ. ಅದು ನಮ್ಮ ಚಿಂತನೆಗಳಿಗೂ ಆದಿಯಾಗಬೇಕು. ಭಾರತೀಯ ಕುಂಟುಂಬ ವ್ಯವಸ್ಥೆ, ಸಾಮರಸ್ಯ ಮತ್ತು ಪರ್ಯಾವರಣದ ರಕ್ಷಣೆ ನಮ್ಮ ಆದ್ಯ‌ ಕರ್ತವ್ಯವಾಗಬೇಕು. ಅದಕ್ಕಾಗಿ ಈ ಯುಗಾದಿಯ ದಿನ‌ ಸಂಕಲ್ಪ‌ ಮಾಡೋಣ, ಎಂದು ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಪಿ ಎಸ್ ಹೇಳಿದರು. 


ನಗರದ‌ ಶಾರದಾ‌ ವಿದ್ಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ (ಕೆ.ಆರ್‌.ಎಂ.ಎಸ್‌.ಎಸ್‌) ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಯುಗಾದಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ವಿಶೇಷ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ ಪುರಾಣಿಕ್, ಶಿಕ್ಷಕರು ತಮ್ಮಲ್ಲಿರುವ ಒಳ್ಳೆಯದನ್ನು ವಿದ್ಯಾರ್ಥಿಗಳಿಗೆ ನೀಡಿದಾಗ ಮಾತ್ರ ಅವರು ದೇಶಕ್ಕೆ ಒಳ್ಳೆಯ ಪ್ರಜೆಗಳಾಗಲು ಸಾಧ್ಯ, ಎಂದು ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಪುರಾಣಿಕ್ ಅವರನ್ನು ಸನ್ಮಾನಿಸಲಾಯಿತು. 


ಕೆ.ಆರ್.ಎಂ.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ಅಧ್ಯಕ್ಷೆ ಡಾ.ಸುಧಾ ಎನ್ ವೈದ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆ.ಆರ್‌.ಎಂ.ಎಸ್‌.ಎಸ್‌ ನ ಕೇಂದ್ರ ಸಹ ಪ್ರಧಾನ ಕಾರ್ಯದರ್ಶಿ ಡಾ.ಮಾಧವ ಎಂ.ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಭಾಗ ಕಾರ್ಯದರ್ಶಿ ವೆಂಕಟೇಶ್ ನಾಯಕ್ ಸ್ವಾಗತಿಸಿದರು ಹಾಗು ಸದಸ್ಯ ರಾಜೇಶ್ ವಂದಿಸಿದರು. ಸದಸ್ಯರಾದ ಮಮತ ಎಂ ಅವರು ಕಾರ್ಯಕ್ರಮ ನಿರೂಪಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top