ಕಾಯಕ ಶುದ್ದಿಯಿಂದ ಆತ್ಮ ಶುದ್ದಿ : ಜಿಲ್ಲಾಧಿಕಾರಿ ಕೂರ್ಮಾರಾವ್‍ ಎಂ.

Upayuktha
0

ಉಡುಪಿ : ವ್ಯಕ್ತಿಗಳು ತಾವು ಮಾಡುವಕಾಯಕವನ್ನು ಶ್ರದ್ದೆ ಮತ್ತು ಭಕ್ತಿಯಿಂಧ ಮಾಡುವುದರ ಮೂಲಕ ಮನಸ್ಸು ಮತ್ತು ಆತ್ಮವನ್ನು ಶುದ್ದಿ ಮಾಡಿಕೊಳ್ಳಬಹುದು ಎಂಬ ದೇವರ ದಾಸಿಮಯ್ಯ ಸಂದೇಶಎಲ್ಲ ಕಾಲಕ್ಕೂ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು.


ಅವರು ಶನಿವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ನಡೆದ,  ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


ಪ್ರತಿಯೊಬ್ಬರೂ ತಾವು ಮಾಡುವ ಕೆಲಸವನ್ನು ಶ್ರದ್ದೆ ಮತ್ತು ಭಕ್ತಿಯಿಂದ ಮಾಡುವುದರ ಮೂಲಕ ಅಭಿವೃಧ್ದಿ ಹೊಂದುವುದರ ಜೊತೆಗೆ ನೆಮ್ಮದಿಯಜೀವನ ಸಾಗಿಸಬಹುದು, ಈ ನಿಟ್ಟಿನಲ್ಲಿ ದೇವರ ದಾಸಿಮಯ್ಯ ಅವರುಕಾಯಕ ಶ್ರದ್ದೆ ಮತ್ತು ವಚನಗಳ ಮೂಲಕ ನೀಡಿರುವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೈನಂದಿನ ಬದುಕಿನಲ್ಲಿ ಅದರಂತೆ ನಡೆಯಬೇಕು ಎಂದರು.


ದೇವರ ದಾಸಿಮಯ್ಯ ಕುರಿತು ಉಪನ್ಯಾಸ ನೀಡಿದ ಗಿರೀಶ್ ಶೆಟ್ಟಿಗಾರ್ ಮಾತನಾಡಿ, ಆದ್ಯ ವಚನಕಾರರೆಂದು ಕರೆಯುವ ದೇವರ ದಾಸಿಮಯ್ಯ ಅವರು,  ಸಮಾಜದಲ್ಲಿನ ಮೂಡನಂಬಿಕೆಗಳು ಮತ್ತು ಜನರಲ್ಲಿನ ಅಜ್ಞಾನವನ್ನು ತೊಡೆದು ಹಾಕಲು ಪ್ರಯತ್ನಿಸಿದ್ದರು. ಮನುಷ್ಯ ಜೀವನದಲ್ಲಿ ಬರುವಯಾವುದೇ ಅಡೆ ತಡೆಗಳಿಗೆ ಎದೆಗುಂದದೆ ಶಾಂತಚಿತ್ತದಿಂದ ದೃಡವಾಗಿ ಅವುಗಳನ್ನು ಎದುರಿಸಿದರೆ ಜೀವನ ಸುಗಮವಾಗಲಿದೆ, ಮನಃಶುದ್ದಿಯಿಂದ ತಮಗೆ ಬಂದಿರುವ ಕಾಯಕವನ್ನು ಮಾಡಿದರೆ ದೇವರು ಒಲಿಯುತ್ತಾನೆ ಎಂದು ತಿಳಿಸಿದ್ದು, ರಾಮನಾಥ ಎಂಬ ಅಂಕಿತನಾಮದಿಂದ ಸುಮಾರು 150 ಕ್ಕೂ ಅಧಿಕ ವಚನಗಳನ್ನು ರಚಿಸಿದ್ದಾರೆ ಎಂದರು.


ಸಭೆಯಲ್ಲಿ ತರಬೇತಿ ನಿರತ ಐ.ಎ.ಎಸ್‍ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್,ಜಿಲ್ಲಾ ಜವಳಿ ಮತ್ತು ಕೈಮಗ್ಗ ಇಲಾಖೆಯ ಸಹಾಯಕ ನಿರ್ದೇಶಕ ಶಿವಶಂಕರ್,ದಕ್ಷಿಣಕನ್ನಡ ಪದ್ಮಶಾಲಿ ಸಂಘದ ಅಧ್ಯಕ್ಷ ರಾಮದಾಸ ಶೆಟ್ಟಿಗಾರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ್ಮಣ ಕೊಡಿಯಾಲ ಬೈಲು, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಾಮ ನಿರ್ದೇಶಿತ ಸದಸ್ಯ ಮಾದವ ಶೆಟ್ಟಿಗಾರ್ ಕೆರೆಕಾಡು, ಉಡುಪಿ ಪ್ರಾಥಮಿಕ ನೇಕಾರರ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಮತ್ತಿತರರು ಉಪಸ್ಥಿತರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ನಮ್ಮ ಭೂಮಿಯ ರಾಮಾಂಜಿ ವಂದಿಸಿ, ನಿರೂಪಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top