ಮನೆಯಲ್ಲೊಂದು ವಿನೂತನ ಮಹಿಳಾ ದಿನಾಚರಣೆ; ಅಂತ್ಯಾಕ್ಷರಿ, ಹಾಡು, ಸಂಭ್ರಮ

Upayuktha
0

ಬೆಂಗಳೂರು: ಪ್ರತೀ ವರ್ಷ ಮಾರ್ಚ್ 8 ರಂದು ದೇಶದಾದ್ಯಂತ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.  ಜೀವನದಲ್ಲಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಹೆಣ್ಣು ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸುತ್ತಿದ್ದಾಳೆ. ಬದುಕಿನ ಹಲವು ಮಜಲುಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗುವ ಮಹಿಳೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಂದು ದಿನ ಮೀಸಲಾಗಿದೆ. ಇದನ್ನೇ  ಮಹಿಳಾ ದಿನಾಚರಣೆ ಎಂಬುದಾಗಿ ಆಚರಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಮಹಿಳಾ ದಿನಾಚರಣೆಯನ್ನು ಬಹಳ ಉತ್ಸುಕತೆಯಿಂದ ಆಚರಿಸಲಾಗುತ್ತಿದೆ.


ನಾಗರಬಾವಿ ಮುಖ್ಯರಸ್ತೆಯಲ್ಲಿರುವ ಸರಸ್ವತಿನಗರದ ಶ್ರೀಮತಿ ವಾಣಿ ರಾಜು ಅವರು ತಮ್ಮ ಮನೆಯಲ್ಲಿ  ಬಂಧು-ಬಳಗದವರೊಂದಿಗೆ ಮಹಿಳಾ ದಿನಾಚರಣೆಯನ್ನು ಗಾಯನ, ನೃತ್ಯ,  ಹಳೆಯ ಚಲನಚಿತ್ರ ಗೀತೆಗಳ ಅಂತ್ಯಾಕ್ಷರಿ ಹೀಗೆ ಇನ್ನೂ ಹಲವಾರು ವಿಶೇಷ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಅತ್ಯಂತ ವಿಜೃಂಭಣೆಯಿಂದ ಹಾಗೂ ವಿನೂತನವಾಗಿ ಆಚರಿಸಿ ಮೆಚ್ಚುಗೆ ಗಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top