ನಿಟ್ಟೆ: ವಿದ್ಯಾರ್ಥಿಗಳು ಇಂದು ಹಣ, ಮೊಬೈಲ್, ಸಾಮಾಜಿಕ ಜಾಲತಾಣ ಮತ್ತು ಮೋಟರ್ ಬೈಕ್ ನ ಹಿಂದೆ ಬಿದ್ದಿದ್ದು ಈ ನಾಲ್ಕು ಸಂಗತಿಗಳು ವಿದ್ಯಾರ್ಥಿಗಳ ಮೇಲೆ ಬಹಳಷ್ಟು ಪ್ರಭಾವವನ್ನು ಬೀರಿವೆ. ಈ ಕುರಿತು ಪೋಷಕರು ಹಾಗೂ ಶಿಕ್ಷಕರು ಮರುಯೋಚಿಸಿ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಎ.ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ. ಭಂಡಾರಿ ಅಭಿಪ್ರಾಯಪಟ್ಟರು.
ಇವರು ಇತ್ತೀಚೆಗೆ ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ ನಂತರದ ಹದಿಹರೆಯದ ವಿದ್ಯಾರ್ಥಿಗಳ ಮನಸ್ಥಿತಿ ಬದಲಾಗಿದ್ದು ವಿದ್ಯಾರ್ಥಿಗಳು ತಮ್ಮನ್ನು ತಾವು ಶಿಕ್ಷಣದಲ್ಲಿ ಆಸಕ್ತಿ ಉಳ್ಳವರು ಎಂದು ಸಾಬೀತುಪಡಿಸಿಕೊಳ್ಳುವ ಒತ್ತಡಕ್ಕೆ ಒಳಗಾಗಿದ್ದಾರೆ. ಹೀಗಾಗಿ ಪೋಷಕರು ಮಕ್ಕಳ ಈ ಒತ್ತಡಗಳ ಕುರಿತು ಅರಿತುಕೊಳ್ಳುವ, ಅರಗಿಸಿಕೊಳ್ಳುವ, ಸಮಸ್ಯೆಯನ್ನು ವಿವರವಾಗಿ ವಿವೇಚಿಸುವ ಹಾಗೂ ಮಕ್ಕಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕು ಎಂದು ಪೋಷಕರಿಗೆ ಕಿವಿ ಮಾತು ಹೇಳಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ