ಉಡುಪಿ ಜಿಲ್ಲೆಯಲ್ಲಿ ಇಂದು 13 ನಾಮಪತ್ರ ಸಲ್ಲಿಕೆ

Upayuktha
0



ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ, ಭಾರತೀಯ ಜನತಾ ಪಾರ್ಟಿಯ ಗುರುರಾಜ ಶೆಟ್ಟಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ, ಭಾರತೀಯ ಜನತಾ ಪಾರ್ಟಿಯ ಕಿರಣ್ ಕುಮಾರ್ ಕೊಡ್ಗಿ ಅವರು 3 ನಾಮಪತ್ರ ಸಲ್ಲಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಸಾದರಾಜ್ ಕಾಂಚನ್, ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಅಚಾರ್ಯ ನಾಮಪತ್ರ ಸಲ್ಲಿಸಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿಯ ಗುರ್ಮೆ ಸುರೇಶ್ ಶೆಟ್ಟಿ 2 ನಾಮಪತ್ರ ಗಳನ್ನು ಹಾಗೂ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಮೊಹಮದ್ ಹನೀಫ್ ಸೋಷಿಯಲ್ ನಾಮಪತ್ರ ಸಲ್ಲಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ವಿದ್ಯಾಲಕ್ಷ್ಮಿ 2 ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ 3, ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ 6, ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ 4, ಕಾಪು ವಿಧಾನ ಸಭಾ ಕ್ಷೇತ್ರಕ್ಕೆ 3, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 4 ಸೇರಿದಂತೆ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
To Top