ವಿಶ್ವವಿದ್ಯಾನಿಲಯ ಕಾಲೇಜು: ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

Upayuktha
0

ಮಂಗಳೂರು: ರಾಜ್ಯದ ಅತ್ಯಂತ ಹಳೆಯ ಸರ್ಕಾರಿ ಕಾಲೇಜುಗಳಲ್ಲಿ ಒಂದಾಗಿರುವ, ಸುಮಾರು ಸುಮಾರು 155 ವರ್ಷಗಳ ಇತಿಹಾಸವಿರುವ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಮುಖ ಘಟಕ ಕಾಲೇಜಾಗಿರುವ, ಹಂಪನಕಟ್ಟೆಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ವಿವಿಧ ಪದವಿ ಕಾರ್ಯಕ್ರಮಗಳಿಗಾಗಿ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಲಾಗಿದೆ. 


ನಗರದ ಹೃದಯಭಾಗದಲ್ಲಿರುವ ಹಿಂದಿನ ಗವರ್ನಮೆಂಟ್ ಕಾಲೇಜು ಅಥವಾ ಈಗಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ಕಲೆ, ವಿಜ್ಞಾನ, ವಾಣಿಜ್ಯ ವಿಭಾಗಗಳ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯ್ದುಕೊಳ್ಳುವ ಅವಕಾಶವಿದೆ. 


ಕಲಾ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಭೂಗೋಳಶಾಸ್ತ್ರ, ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಪತ್ರಿಕೋದ್ಯಮ, ಪ್ರವಾಸೋದ್ಯಮ ವಿಷಯಗಳನ್ನು ಕಲಿಯುವ ಅವಕಾಶವಿದೆ. ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ಗಣಿತಶಾಸ್ತ್ರ, ಗಣಕ ವಿಜ್ಞಾನ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸೂಕ್ಷ್ಮಾಣುಜೀವ ಶಾಸ್ತ್ರ ವಿಷಯಗಳನ್ನು ಆಯ್ದುಕೊಳ್ಳಬಹುದು. ಇದರ ಹೊರತಾಗಿ ವಾಣಿಜ್ಯಶಾಸ್ತ್ರ ಹಾಗೂ ಬಿಬಿಎ (ಟೂರಿಸಂ & ಟ್ರಾವೆಲ್) ಕಾರ್ಯಕ್ರಮಗಳನ್ನು ಆರಿಸಿಕೊಳ್ಳಬಹುದು. 


ಆಸಕ್ತ ವಿದ್ಯಾರ್ಥಿಗಳು, ಕಾಲೇಜಿನ ಕಛೇರಿಗೆ ಭೇಟಿ ನೀಡಿ ಅರ್ಜಿ ಪ್ರತಿಗಳನ್ನು ಪಡೆದುಕೊಳ್ಳಬಹುದಾಗಿದ. 


ಆನ್ ಲೈನ್ ದಾಖಲಾತಿಗಾಗಿ

https://uucms.karnataka.gov.in/Login/OnlineStudentStudentRegistrationForm  ಗೆ ಭೇಟಿ ನೀಡಬಹುದು. 


ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ಸೈಟ್

https://universitycollegemangalore.com/ ಗೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top