ಮೇ 1: ಎಸ್‌ಡಿಎಂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Upayuktha
0

 


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. 


ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ‘ಕ್ಷೇಮವನ’ ಬೆಂಗಳೂರು ಇದರ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಇನ್ನೋರ್ವ ಹಿರಿಯ ವಿದ್ಯಾರ್ಥಿ, ನಾವೂರಿನ ಆರೋಗ್ಯ ಕ್ಲಿನಿಕ್ ನ ವೈದ್ಯ ಡಾ. ಪ್ರದೀಪ್ ಎ. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.


11.30ರಿಂದ ಸಂಘದ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಪರಸ್ಪರ ಸಂವಾದ ಕಾರ್ಯಕ್ರಮ ನಡೆಯಲಿದೆ. 


ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕಾರ್ಯಕ್ರಮ ಸಂಘಟಕರು ಮನವಿ ಮಾಡಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top