ತೆಂಕನಿಡಿಯೂರು ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Upayuktha
0

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಏ.15 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು. 


ಸಂಪನ್ಮೂಲ ವ್ಯಕ್ತಿಗಳಾದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀ ಪ್ರಶಾಂತ ಎನ್. ಅವರು ಅಂಬೇಡ್ಕರ್ ಬದುಕು, ಚಿಂತನಾ ಕ್ರಮ, ಅವರ ಸಾಧನೆಗಳ ಕುರಿತು ಮಾತನಾಡಿದರು. ಸಂವಿಧಾನ ರೂಪಿಸುವಲ್ಲಿ ಅವರು ತೋರಿದ ಶ್ರದ್ಧೆ, ಮಾನವ ಪ್ರೀತಿ, ಜಗತ್ತಿನ ಸಂವಿಧಾನಗಳ ಅಧ್ಯಯನವನ್ನು ಮಾಡಿ ಆ ಮೂಲಕ ಭಾರತದ ಸಂವಿಧಾನವನ್ನು ಜಗತ್ತಿನ ಶ್ರೇಷ್ಠ ಸಂವಿಧಾನವನ್ನಾಗಿ ರೂಪಿಸಲು ಅಪಾರ ಪರಿಶ್ರಮಪಟ್ಟ ಬಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.


ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಅವರು ಅಂಬೇಡ್ಕರ್ ವಿದ್ಯಾರ್ಥಿಗಳಿಗೆ, ತಳ ಸಮುದಾಯದವರಿಗೆ ಸ್ಪೂರ್ತಿಯ ಚಿಲುಮೆ ಎನ್ನುತ್ತಾ ಸಂವಿಧಾನದ  ಮಹತ್ವದ ಬಗ್ಗೆ ಮಾತನಾಡಿದರು.  ಕಾಲೇಜಿನ ಗ್ರಂಥಪಾಲಕರಾದ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಚಾಕರಾದ ಶ್ರೀ ಕೃಷ್ಣ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಎಚ್.ಕೆ. ವೆಂಕಟೇಶ ನಿರೂಪಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top