ಮಂಗಳೂರು ವಿವಿ: ಎಪ್ರಿಲ್ 14 ರಂದು ಡಾ. ಬಿ ಆರ್ ಅಂಬೇಡ್ಕರ್ ರವರ 132ನೇ ಜಯಂತಿ

Upayuktha
0

 


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಸಂವಿಧಾನಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಎಪ್ರಿಲ್ 14 (ಶುಕ್ರವಾರ) ರಂದು ವಿಶ್ವವಿದ್ಯಾನಿಲಯದ ಮಂಗಳಾಸಭಾಂಗಣದಲ್ಲಿ ಬೆಳಿಗ್ಗೆ 10.30 ಕ್ಕೆಆಯೋಜಿಸಿದೆ. 


ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್ ಯಡಪಾಡಿತ್ತಾಯರವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಧಾನ ಭಾಷಣ ಮಾಡಲಿದ್ದಾರೆ.ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಪಂಪ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರ (ರಿ.)ದ  ಕಲಾವಿದರು "ಅಂಬೇಡ್ಕರ್" ಸಾಮಾಜಿಕ ನಾಟಕವನ್ನು ಪ್ರಸ್ತುತಪಡಿಸಲಿದ್ದಾರೆ, ಎಂದು ಕುಲಸಚಿವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top