ಬಿಜೆಪಿ ಈ ಬಾರಿ ನಿರೀಕ್ಷೆಗೂ ಮೀರಿ ಪ್ರಗತಿ: ಬಿ.ಎಲ್. ಸಂತೋಷ್

Upayuktha
0

ಕಾವೂರು: "ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ವಿನ ಪ್ರಗತಿ ಸಾಧಿಸಲಿದೆ ಕಾದು ನೋಡಿ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.


ಕಾವೂರಿನಲ್ಲಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.


ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದರು.ಹಾಲಿ ಶಾಸಕ ಉತ್ತರ ಕ್ಷೇತ್ರದ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರ ಜತೆ ಮಾತುಕತೆ ನಡೆಸಿದರಲ್ಲದೆ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದರು.


ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಸಹಿತ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top