ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿಲ್ಲ; ಸುಳ್ಳು ಸುದ್ದಿ ನಂಬಬೇಡಿ: ಬಿಜೆಪಿ

Upayuktha
0

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಮೊದಲ 100 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸುಳ್ಳು ಸುದ್ದಿಯಾಗಿದ್ದು, ಇದನ್ನು ಯಾರೂ ನಂಬ ಬಾರದು ಮತ್ತು ಪ್ರಚಾರ ಮಾಡಬಾರದು ಎಂದು ಬಿಜೆಪಿಯ ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಸ್ಪಷ್ಟಪಡಿಸಿದ್ದಾರೆ.


ಸೋಲಿನ ಭೀತಿಯಲ್ಲಿರುವ ವಿರೋಧ ಪಕ್ಷಗಳು ಷಡ್ಯಂತ್ರ ಹೂಡಿ ಈ ರೀತಿಯ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿದ್ದು, ಇದನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದರು.


ಬಿಜೆಪಿ ಈ ತನಕ ಅಭ್ಯರ್ಥಿಗಳ ಯಾವುದೇ ಅಧಿಕೃತ ಪಟ್ಟಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ನಮ್ಮ ಪಕ್ಷದಲ್ಲಿ ಅಭ್ಯರ್ಥಿಯ ಆಯ್ಕೆ ಪ್ರಜಾಪ್ರಭುತ್ವದ ವಿಧಿಯಂತೆ ನಡೆಯುತ್ತಿದ್ದು,. ಸೂಕ್ತ ಸಮಯದಲ್ಲಿ ದೆಹಲಿಯಲ್ಲಿರುವ ಪಕ್ಷದ ಸಂಸದೀಯ ಮಂಡಳಿ ಒಪ್ಪಿಗೆಯೊಂದಿಗೆ ಅಧಿಕೃತ ಪಟ್ಟಿಯನ್ನು ಮಾಧ್ಯಮದ ಮೂಲಕ ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುವುದು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top