
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳಕ್ಕೆ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಕೇಂದ್ರ ಕಛೇರಿಯ ಮಂಜೂರಾತಿಯಂತೆ 10 ದಿನಗಳ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಬುಧವಾರ ಬೆಳಿಗ್ಗೆ 11:00 ಗಂಟೆಗೆ ಶ್ರೀ ಭಾರತೀ ಕಾಲೇಜಿನಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಐ.ಪಿ.ಎಸ್, ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ವಹಿಸಲಿದ್ದಾರೆ ಎಂದು ಗೃಹರಕ್ಷಕದಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ