ಉಡುಪಿ: ದಾರ್ಶನಿಕರ ಸಾಧನೆಯು,ಅವರು ನಡೆದು ಬಂದ ಕಷ್ಟದ ಹಾದಿಯನ್ನು ತಿಳಿಸುತ್ತದೆ. ಭಗೀರಥ ಮಹರ್ಷಿಯ ತ್ಯಾಗ, ಪ್ರಯತ್ನ, ಛಲ, ದೃಢಸಂಕಲ್ಪದಿಂದ ಪವಿತ್ರಗಂಗೆಯು ಭೂಮಿಗೆ ಬರುವಂತಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು.
ಅವರು ಇಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಆಯೋಜಿಸಲಾದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಗಂಗೆಯ ಜಲದರ್ಪಣದಿಂದ ಪೂರ್ವಜರಿಗೆ ಮೋಕ್ಷ ಸಿಗುವಂತೆ ಮಾಡಿದ ಕಠಿಣ ತಪಸ್ವಿ ಭಗೀರಥ ಮಹರ್ಷಿಗಳು.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಭಗೀರಥ ಪ್ರಯತ್ನ ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ನರಸಿಂಹಮೂರ್ತಿ, ಭವನ ಪ್ರಸಾದ್ ಹೆಗ್ಡೆ, ಸಂಗೊಳ್ಳಿ ರಾಯಣ್ಣ ಬಳಗದ ಜಿಲ್ಲಾಧ್ಯಕ್ಷ ಸಿದ್ಧಬಸವಯ್ಯ ಸ್ವಾಮಿ ಹಿರೇಮಠ, ಸಾಹಿತಿ ನಾರಾಯಣ ಮಡಿಯ ಹಾಗೂ ಜಿಲ್ಲಾಡಳಿತದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ