'ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿ' - ಡಾ.ಕುರಿಯನ್

Upayuktha
0

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಯೂಥ್ ರೆಡ್ ಕ್ರಾಸ್, ಎನ್‍ಎಸ್‍ಎಸ್ ಮತ್ತು ಮಂಗಳೂರಿನ ರೆಡ್ ಕ್ರಾಸ್ ರಕ್ತ ನಿಧಿ ಘಟಕಗಳ ಸಹಯೋಗದಲ್ಲಿ ವಿದ್ಯಾಗಿರಿಯಲ್ಲಿ ಬುಧವಾರ ರಕ್ತದಾನ ಶಿಬಿರ ನಡೆಯಿತು.


ಶಿಬಿರ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ರಕ್ತದಾನ ಮಾಡುವಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸದಾ ಮುಂಚೂಣಿಯಲ್ಲಿರುವುದು ಶ್ಲಾಘನೀಯ. ಯಾವುದೇ ಅವಘಡಗಳು ಸಂಭವಿಸಿದಾಗ ಜೀವರಕ್ಷಣೆಯಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದರು. 


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪ್ರತಿ ವರ್ಷವೂ ಯಶಸ್ವಿಯಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಬಂದಿದೆ. ಇದಕ್ಕೆ ಕಾಲೇಜಿನ ವಿದ್ಯಾರ್ಥಿಗಳ ಆಸಕ್ತಿಯೇ ಮುಖ್ಯ ಕಾರಣ. ಇದು ಎಲ್ಲರಿಗೂ ಮಾದರಿಯಾಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು. 


ಶಿಬಿರದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು  160 ಯೂನಿಟ್ ರಕ್ತ ದಾನ ಮಾಡಿದರು. 


ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಯೋಜಕ ಪ್ರವೀಣ್, ಕಾಲೇಜಿನ ಎನ್‍ಸಿಸಿ ಅಧಿಕಾರಿ ಡಾ. ಯುವರಾಜ್, ಎನ್‍ಎಸ್‍ಎಸ್  ಸಂಯೋಜಕ ವಸಂತ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕ ಸುಹಾಸ್ ಇದ್ದರು. ವಿದ್ಯಾರ್ಥಿನಿ ಗಗನಾ ಲೋಕೇಶ್ ಕಾರ್ಯಕ್ರಮ ಕಾರ್ಯಕ್ರಮ ನಿರ್ವಹಿಸಿ, ಲಾವಣ್ಯ ಪ್ರಾರ್ಥಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Advt Slider:
To Top