ಸುಬ್ರಹ್ಮಣ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿ ರಾಜ್ಯದ ಜನತೆಯ ಸುಭಿಕ್ಷಗಾಗಿ ಪ್ರಾರ್ಥನೆ ಸಲ್ಲಿಸಿದರು.
ಮೊದಲು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಗೈದು ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು. ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮುಖ್ಯಮಂತ್ರಿಯವರನ್ನು ಕ್ಷೇತ್ರದ ವತಿಯಿಂದ ಹರ್ಷೇಂದ್ರ ಕುಮಾರ್ ಬರಮಾಡಿಕೊಂಡರು. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಇದ್ದರು.
ಸಪತ್ನೀಕರಾಗಿ ಕ್ಷೇತ್ರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ದೇವರಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಅನಂತರ ಸಮಫುಟ ನರಸಿಂಹ ಸ್ವಾಮಿ ಹಾಗೂ ಹೊಸಳಿಗೆಮ್ಮ ದೈವದ ದರ್ಶನ ಪಡೆದು ಅಲ್ಲಿಂದ ಮಂಗಳೂರಿಗೆ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಶೋಭಾ ಗಿರಿಧರ್, ವನಜಾ ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್ ಕುಮಾರ್, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಾಜಿ ಜಿ.ಪಂ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗೀರಥಿ ಮುರುಳ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮುಂತಾದವರು ಜತೆಗಿದ್ದರು.
ಮುಖ್ಯಮಂತ್ರಿಗಳು ಬುಧವಾರ ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿ, ಗುರುವಾರ ಕೊಲ್ಲೂರಿಗೆ ತೆರಳಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ