ಬೆಂಗಳೂರು: ಮಲ್ಲೇಶ್ವರಂ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮೋತ್ಸವದ ಪ್ರಯುಕ್ತ ಏಪ್ರಿಲ್ 3, ಸೋಮವಾರ ಏರ್ಪಡಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕು|| ದೀಪ್ತಿ ಶ್ರೀನಿವಾಸನ್ ಮತ್ತು ಕು|| ಮನಸ್ವಿ ಕಶ್ಯಪ್ ಅವರು ಅಪರೋಕ್ಷ ಜ್ಞಾನಿಗಳು ರಚಿಸಿದ ಹಲವಾರು ಅಪರೂಪದ ಕೃತಿಗಳನ್ನು ಸುಶ್ರಾವ್ಯವಾಗಿ ಹಾಡಿ ಸಭಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಮನಸೂರೆಗೊಂಡರು.
ಇವರ ಗಾಯನಕ್ಕೆ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಸುದರ್ಶನ್ ತಬಲಾ ವಾದನದಲ್ಲಿ ಸಾಥ್ ನೀಡಿದರು. ರಾಮಮಂದಿರದ ಗೌರವ ಕಾರ್ಯದರ್ಶಿಗಳಾದ ಸಿ. ಚಂದ್ರಶೇಖರ್ ಅವರು ವಂದನಾರ್ಪಣೆ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ