ಬೆಳೆ ವಿಮೆ ತಿರಸ್ಕೃತ : ಆಕ್ಷೇಪಣೆ ಆಹ್ವಾನ

Upayuktha
0

 


ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಯಾದ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಬಾರದಿರುವ ಹಿನ್ನೆಲೆ ತಿರಸ್ಕರಿಸಿರುತ್ತಾರೆ.

  

ಈ ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತ್‍ಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದ್ದಲ್ಲಿ 15 ದಿನಗಳ ಒಳಗಾಗಿ ಪೂರಕ ದಾಖಲೆಗಳೊಂದಿಗೆ ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಅಥವಾ ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top