ಕೋವಿಡ್ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ: ಡಿಸಿ ಕೂರ್ಮಾರಾವ್ ಎಂ

Upayuktha
0

ಉಡುಪಿ: ಪ್ರಸ್ತುತ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಅವರು ಶನಿವಾರ, ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಪರಿಸ್ಧಿತಿ, ಪರೀಕ್ಷೆಯ, ಸಮುಚ್ಛಿತ ನಡವಳಿಕೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುತ್ತಿರುವ ಒಳರೋಗಿಗಳ ಗಂಟಲು ದ್ರವದ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿದ ಅವರು,  SARI, ILI ಹಾಗೂ Co-morbid ಪ್ರಕರಣಗಳಿಗೂ ಕೋವಿಡ್-19 ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಿದರು.

 

ಚುನಾವಣೆ ಸಮೀಪಿಸುತ್ತಿರುವುದರಿಂದ ಸಭೆಗಳಲ್ಲಿ, ಜನ ದಟ್ಟಣೆ ಇರುವಲ್ಲಿ ಹಾಗೂ ಚುನಾವಣಾ ಸಿಬ್ಬಂದಿಗಳ ತರಬೇತಿ ಮುಂತಾದ ಕಡೆಗಳಲ್ಲಿ ಅಗತ್ಯ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು. 

 

ಸಭೆಯಲ್ಲಿ ಬೇಸಿಗೆ ಹಾಗೂ ಮುಂಬರುವ ಮಳೆಗಾಲದಲ್ಲಿ ಬರುವ ಇತರೇ ಸಾಂಕ್ರಾಮಿಕ ರೋಗಗಳ ಕುರಿತು ಚರ್ಚಿಸಲಾಯಿತು.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಐ.ಎಂ.ಎ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು. 



ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ



ಉಡುಪಿ:
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಮೇ 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಮೇ 13 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‍ಗಳನ್ನು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ,ಹೋಟೆಲ್, ಕ್ಲಬ್ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ,ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top