ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣಾ ಜಾಗೃತಿ ಮೂಡಿಸಲು ಎಲೆಕ್ಷನ್ ಫೋಕಸ್ ಎಂಬ ಇ-ಪೇಪರನ್ನು ನಗರದ ಜಿಲ್ಲಾ ಪಂಚಾಯತ್‌ನ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಏ.3ರ ಸೋಮವಾರ ಮಧ್ಯಾಹ್ನ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರು, ಮಾದರಿ ನೀತಿ ಸಂಹಿತೆಯ ಜಿಲ್ಲಾ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಚೆನ್ನಬಸಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ