ಏ.25-26: ಬಿಜೆಪಿಯಿಂದ ಮಹಾಪ್ರಚಾರ ಅಭಿಯಾನ; ರಾಜ್ಯಾದ್ಯಂತ 'ಹವಾ' ಎಬ್ಬಿಸಲು ಸಜ್ಜು

Upayuktha
0

ಮಂಗಳೂರು: ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವಂತೆಯೇ ಬಿಜೆಪಿ ಪ್ರಚಾರದ ಅಭಿಯಾನವನ್ನು ತೀವ್ರಗೊಳಿಸಲು ಮುಂದಾಗಿದೆ. ಏಪ್ರಿಲ್ 25 ಮತ್ತು 26ರಂದು ರಾಜ್ಯದಾದ್ಯಂತ ವಿಶೇಷ 'ಮಹಾಪ್ರಚಾರ ಅಭಿಯಾನ'ವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಲ್ಲಿ ಕೇಂದ್ರ, ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ನಾಯಕರು ವಿವಿಧ ಹಂತಗಳಲ್ಲಿ ಭಾಗವಹಿಸಲಿದ್ದಾರೆ.


ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಹಾ ಪ್ರಚಾರ ಅಭಿಯಾನದ ವಿವರಗಳನ್ನು ನೀಡಿದರು.


ಈ ಮಹಾಪ್ರಚಾರ ಅಭಿಯಾನವು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ನಡೆಯಲಿದ್ದು, 224 ಕ್ಷೇತ್ರಗಳಲ್ಲೂ ಪತ್ರಿಕಾಗೋಷ್ಠಿಗಳು ನಡೆಯಲಿವೆ. ಕೇಂದ್ರ ಸಚಿವರು, ರಾಷ್ಟ್ರೀಯ ನಾಯಕರು ಸೇರಿದಂತೆ ಕೇಂದ್ರ ಮಟ್ಟದ 98 ಮಂದಿ ಪ್ರಮುಖರು ಈ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ.


150ಕ್ಕೂ ಹೆಚ್ಚು ರಾಜ್ಯ ನಾಯಕರು ಈ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ. ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿ.ಪಂ, ತಾ.ಪಂ, ಮಹಾನಗರಪಾಲಿಕೆ ಸದಸ್ಯರು ಹಾಗೂ ನಗರಸಭಾ ಸದಸ್ಯರು ಈ ವಿಶೇಷ ಮಹಾಪ್ರಚಾರ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಈ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಭಾರತೀಯ ಜನತಾ ಪಾರ್ಟಿ ಗೆಲ್ಲುವ ದೃಢ ವಿಶ್ವಾಸವಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.


ಭಾಗವಹಿಸುವ ರಾಷ್ಟ್ರೀಯ ನಾಯಕರು:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿಗಳಾದ ಅರುಣ್ ಸಿಂಗ್,  ಕೇಂದ್ರ ಸಚಿವರು ಮತ್ತು ಕರ್ನಾಟಕ ಚುನಾವಣಾ ಉಸ್ತುವಾರಿಳಾದ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಶಾಸಕರಾದ ಸಿ.ಟಿ ರವಿ, ಕೇಂದ್ರ ಸಚಿವರು ಮತ್ತು ಕರ್ನಾಟಕ ಚುನಾವಣಾ ಸಹ-ಉಸ್ತುವಾರಿ ಮನ್ಸುಖ್ ಮಾಂಡ್ವಿಯಾ, ತಮಿಳುನಾಡು ರಾಜ್ಯಾಧ್ಯಕ್ಷರು ಮತ್ತು ಕರ್ನಾಟಕ ಚುನಾವಣಾ ಸಹ-ಉಸ್ತುವಾರಿಗಳಾದ ಕೆ. ಅಣ್ಣಾಮಲೈ,  ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,  ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ 12 ಮಂದಿ ಕೇಂದ್ರ ನಾಯಕರು ಮಹಾಪ್ರಚಾರ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.


ವಿಶೇಷ ಮಹಾಪ್ರಚಾರ ಅಭಿಯಾನದಲ್ಲಿ ಭಾಗವಹಿಸುವ ರಾಜ್ಯ ನಾಯಕರು:

ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ. ಸದಾನಂದ ಗೌಡ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವರಾದ  ಕು. ಶೋಭಾ ಕರಂದ್ಲಾಜೆ, ಸಚಿವರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್ ಅಶೋಕ್, ವಿ. ಸೋಮಣ್ಣ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, 

ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಸಹಿತ 12 ಮಂದಿ ರಾಜ್ಯ ನಾಯಕರು ಭಾಗವಹಿಸುತ್ತಿದ್ದಾರೆ.


ಕಾರ್ಯಕರ್ತರಿಂದಲೇ ಇರುವ ಕಾರ್ಯಕರ್ತರೇ ಬೆಳೆಸಿದ ರಾಜಕೀಯ ಪಕ್ಷ ಬಿಜೆಪಿ. ಮುಂದಿನ ಪೀಳಿಗೆಗೆ ಬೇಕಾದ ರಾಜಕೀಯ ವ್ಯವಸ್ಥೆಯನ್ನು ಸಿದ್ಧಪಡಿಸುತ್ತಿರುವ ರಾಜಕೀಯ ಪಕ್ಷವಿದು.  ಹಳೆ ಬೇರು ಹೊಸ ಚಿಗುರಿನ ಮಿಶ್ರಣದಂತೆ ಹಿರಿಯರು, ಹೊಸಬರು ಎಂಬುದರ ನಡುವೆ ಸಂತುಲಿತ ಪಟ್ಟಿಯ ಮೂಲಕ ಹೊಸತನ ಕೊಡಲು ಮುಂದಾಗಿದ್ದೇವೆ. ಪಟ್ಟಿಯಲ್ಲಿ 9 ಜನ ವೈದ್ಯರು, ಐಪಿಎಸ್, ಐಎಎಸ್ ಆದ ತಲಾ ಒಬ್ಬರನ್ನು ಆಯ್ಕೆ ಮಾಡಿದ್ದೇವೆ. 70ಕ್ಕೂ ಹೆಚ್ಚು ಜನ ಸಾಮಾನ್ಯರನ್ನು ಆಯ್ಕೆ ಮಾಡಿದ್ದೇವೆ. ಇದರಲ್ಲಿ 75 ಜನರು ಮೊದಲ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಪಾರ್ಟಿಯು ಸಾಮಾನ್ಯ ಜನರ ಭಾವನೆ, ಒಡನಾಟಕ್ಕೆ ಸಂಬಂಧಿಸಿದ ಅಭ್ಯರ್ಥಿಗಳನ್ನೇ ನಾವು ಆಯ್ಕೆ ಮಾಡಿದ್ದೇವೆ.

-ಕೋಟ ಶ್ರೀನಿವಾಸ ಪೂಜಾರಿ, ಸಚಿವರು


ಬಿಜೆಪಿ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ನಡೆದ ಇಂದಿನ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರರಾದ ಜಗದೀಶ್ ಶೇಣವ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ವಕ್ತಾರರಾದ ರಾಧಾಕೃಷ್ಣ, ರಾಜ್ಯ ಮಾಧ್ಯಮ ಸಂಚಾಲಕ ರತನ್ ರಮೇಶ್ ಪೂಜಾರಿ ಮತ್ತು ಬಿಜೆಪಿ ಮುಖಂಡ ಸಂಜಯ್ ಪ್ರಭು ಅವರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top