ಶಾಂತಾ ಪುತ್ತೂರು ಅವರಿಗೆ ಡಾ.ರಾಜ್ ಕುಮಾರ್ ಪ್ರಶಸ್ತಿ

Upayuktha
0

ಎಡನೀರು: ಬೆಂಗಳೂರಿನ ಜಾಗೃತಿ ಸೇವಾ ಟ್ರಸ್ಟ್ ಸೇವಾ ಸಂಸ್ಥೆ ಆಶ್ರಯದಲ್ಲಿ ಎಡನೀರು ಮಠದ ಸಹಕಾರದಲ್ಲಿ ಏಪ್ರಿಲ್ 15ರಂದು ಎಡನೀರು ಮಠದಲ್ಲಿ ನಡೆದ ಗಡಿನಾಡಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮದಲ್ಲಿ 2023ನೇ ಸಾಲಿನ ಅಂತರ್ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕಾರ ಹಾಗೂ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೊಳುವಾರು ನಿವಾಸಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರುರವರನ್ನು ಹಲವು ಕ್ಷೇತ್ರಗಳಲ್ಲಿ ಸಾಧನೆ ಗುರುತಿಸಿ ಬಹುಮುಖ ಪ್ರತಿಭೆ ನೆಲೆಯಲ್ಲಿ ಡಾ.ರಾಜ್ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜಾಗೃತಿ ಟ್ರಸ್ಟ್ ಅಧ್ಯಕ್ಷರಾದ ಬಿ.ನಾಗೇಶ್, ಬಿ. ಶಿವಕುಮಾರ್ ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್, ಸಮಾಜಸೇವಕಿ ಜ್ಯೋತಿ ರೆಡ್ಡಿ, ಡಾ. ಭಾಗೀರಥಿ, ಡಾ.ಸಿ.ಎಲ್. ಶಿವಮೂರ್ತಿ ಮೈಕ್ರೋ ಬಯಾಲಜಿ ವಿಭಾಗ ಕಿಮ್ಸ್ ಆಸ್ಪತ್ರೆ ಬೆಂಗಳೂರು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಗುರುರಾಜ್ ಎಂ.ಆರ್ ಕಾಸರಗೋಡು, ಮೊದಲಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದು ಡಾ. ವಾಣಿಶ್ರೀ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ಸಭಾಧ್ಯಕ್ಷತೆ ವಹಿಸಿದ್ದರು. ನಂತರ ಡಾ.ಶೇಖರ್ ಅಜೆಕಾರುರವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top