ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯಿಂದ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವಿಜ್ಞಾನ ವಿಭಾಗದಲ್ಲಿ ಆಶ್ರಯ ಪಿ ಹಾಗೂ ದೀಪ್ತಿ ಲಕ್ಷ್ಮಿ 592 ಅಂಕ ಗಳಿಸಿ ರಾಜ್ಯಕ್ಕೆ 5 ನೆ ಸ್ಥಾನ ಹಾಗು ತಾಲೂಕಿಗೆ ಪ್ರಥಮ ಸ್ಥಾನ ಪಡಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆದಿತ್ಯ ನಾರಾಯಣ 595 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಹಾಗು ತಾಲೂಕಿಗೆ ಪ್ರಥಮ ಸ್ಥಾನ ಪಡಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಮಂಜುಶ್ರೀ 591 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಹಾಗು ಜಿಲ್ಲೆಗೆ ಪ್ರಥಮ ಸ್ಥಾನ ಪಡಕೊಂಡಿದ್ದಾರೆ. ಈ ಎಲ್ಲಾ ಸಾಧಕರನ್ನು ಆಡಳಿತ ಮಂಡಳಿ ಹಾಗು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಆಡಳಿತ ಮಂಡಳಿ ಸದಸ್ಯೆ ಹಾಗು ಶಿಕ್ಷಣ ತಜ್ಞೆ ಶ್ರೀಮತಿ ವತ್ಸಲಾ ರಾಜ್ನಿ ಸಾಧಕರನ್ನು ಸನ್ಮಾನಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹೇಶ್ ನಿಟಿಲಾಪುರ ಹಾಗು ಉಪನ್ಯಾಸಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ