ಮಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ಉಚಿತ ವಸತಿ

Upayuktha
0

 


ಮಂಗಳೂರು: ತಾಲೂಕಿನ ದೇರೆಬೈಲು ಹಾಗೂ ಕಂಕನಾಡಿ ಪರಿಸರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಉದ್ಯೋಗಸ್ಥ ಮಹಿಳೆಯರ ವಸತಿಗೃಹಗಳು ಕಾರ್ಯ ನಿರ್ವಹಿಸುತ್ತಿವೆ.


ಹೊರ ಜಿಲ್ಲೆಗಳಿಂದ ಉದ್ಯೋಗದ ನಿಮಿತ್ತ ಬರುವ ಮಹಿಳೆಯರಿಗೆ ಮತ್ತು ಹೆಚ್ಚು ಶುಲ್ಕವನ್ನು ಭರಿಸಿ ಇತರ ಸ್ಥಳಗಳಲ್ಲಿ ವಾಸ್ತವ್ಯ ಮಾಡುತ್ತಿರುವ ಮಹಿಳೆಯರು ಕಡಿಮೆ ಶುಲ್ಕವನ್ನು ಪಾವತಿಸಿ ಸುರಕ್ಷತೆ ಹಾಗೂ ಎಲ್ಲಾ ಸೌಕರ್ಯಗಳನ್ನು ಹೊಂದಿರುವ ಇಲಾಖೆಯ ಉದ್ಯೋಗಸ್ಥ ಮಹಿಳೆಯರ ವಸತಿಗೃಹದಲ್ಲಿ ವಾಸ್ತವ್ಯ ಮಾಡಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ನಗರದ ಕಂಕನಾಡಿಯ ಬಿಷಪ್ ವಿಕ್ಟರ್ ಅಡ್ಡರಸ್ತೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂ.ಸಂಖ್ಯೆ: 0824-2432809, 2959809 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top