ಪುಂಜಾಲಕಟ್ಟೆ: ಸ.ಪ್ರ.ದ ಕಾಲೇಜಿನಲ್ಲಿ ಜೀವನ ಕೌಶಲ್ಯ ತಬೇತಿ ಶಿಬಿರ

Upayuktha
0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2, ನಿಮಾನ್ಸ್ ಬೆಂಗಳೂರು ಮತ್ತು ಯುವ ಸ್ಪಂದನ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಒಂದು ದಿನದ ಜೀವನ ಕೌಶಲ್ಯ ತರಬೇತಿಯನ್ನು ಇಂದು (ಏ.20) ಆಯೋಜಿಸಲಾಗಿತ್ತು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಕಾಂತ್ ಪೂಜಾರಿ ಬಿರಾವು ಮತ್ತು ಶಾಂತಪ್ಪ ಮುಂಡಾಜೆ, ಶ್ರೀಮತಿ ರಾಜೇಶ್ವರಿ ಎಚ್.ಎಸ್, ಸಂತೋಷ್ ಪ್ರಭು ಎಂ, ಶ್ರೀಮತಿ ದೀಕ್ಷಿತಾ ವಿ, ಶ್ರೀಮತಿ ಚಿತ್ರಾ ಪಡಿಯಾರ್ ಇವರು ಚಟುವಟಿಕೆಯ ಮೂಲಕ ಜೀವನ ಕೌಶಲ್ಯ ತರಬೇತಿಯನ್ನು ನೀಡಿದರು.


ಕಾಲೇಜಿನ ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಪ್ರಥಮ ವರ್ಷದ ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಎಸ್ ಪದಾಧಿಕಾರಿಗಳು ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top