ಗೋವಿಂದ ದಾಸ ಕಾಲೇಜು: ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಾಗಾರ

Upayuktha
0


ಮಂಗಳೂರು:
ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಯುವ ಪೀಳಿಗೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸುವ ಹಿನ್ನಲೆಯಲ್ಲಿ ಗೋವಿಂದ ದಾಸ ಕಾಲೇಜು ಸುರತ್ಕಲ್‍ನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ,  ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಗ್ರಾಹಕರ ವೇದಿಕೆ, ಲಯನ್ಸ್ ಕ್ಲಬ್ ಸುರತ್ಕಲ್ ಇವುಗಳ ಆಶ್ರಯದಲ್ಲಿ  ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಾಗಾರವನ್ನು ನಡೆಸಲಾಯಿತು.


ರಸ್ತೆ ನಿಯಮಗಳನ್ನು ಉಲ್ಲಂಘಿಸದೆ ಹೆಲ್ಮೆಟ್ ಧರಿಸಿಕೊಂಡು ವಾಹನಗಳನ್ನು ಓಡಿಸಿದರೆ ಅಪಘಾತಗಳು ನಿಯಂತ್ರಣಕ್ಕೆ ಬರುತ್ತದೆ ಎಂದು ಮಂಗಳೂರು ಉತ್ತರ ಸಂಚಾರಿ ಪೋಲಿಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಚಂದ್ರಮ್ಮ ಹೇಳಿದರು. ವಿದ್ಯಾರ್ಥಿಗಳು ದೇಶ ಕಟ್ಟುವ ಬಲಿಷ್ಠ ಶಕ್ತಿಗಳಾಗಿದ್ದು  ರಸ್ತೆ ಅಪಘಾತಗಳ ಮೂಲಕ ಯುವಜನತೆಯ ಹಾಗೂ ದೇಶದ ಭವಿಷ್ಯ ಕಮರಿ ಹೋಗಬಾರದು ಎಂದು ಮುಖ್ಯ ಅತಿಥಿಗಳಾಗಿ ಮಾತನಾಡಿದ ಲಯನ್ಸ್ ಕ್ಲಬ್ ಸುರತ್ಕಲ್ ಇದರ ಪ್ರಥಮ ಉಪಾಧ್ಯಕ್ಷ ಲ. ಜಯಂತ್ ಶೆಟ್ಟಿ ಹೇಳಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಅವರು ವಾಹನ ಚಲಾಯಿಸುವ ವೇಳೆಯಲ್ಲಿ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ನುಡಿದರು. 


ಗೋವಿಂದ ದಾಸ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಅಕ್ಷತಾ ವಿ., ದಯಾ ಸುವರ್ಣ, ಲಯನ್ಸ್ ಕ್ಲಬ್ ಸುರತ್ಕಲ್‍ನ ಕಾರ್ಯದರ್ಶಿ ಲ. ಶಶಿಕಲಾ ಶೆಟ್ಟಿ, ಸದಸ್ಯರಾದ ಲ.ಗುಣವತಿ ರಮೇಶ್, ಲ. ರಾಜಯ್ಯ,  ಸಂಚಾರಿ ಪೋಲಿಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್ ಕಾಂತರಾಜ್ ಉಪಸ್ಥಿತರಿದ್ದರು.


ಸೌಪರ್ಣಿಕ ಸ್ವಾಗತಿಸಿ ಶಮಾ ಫರ್ಹಾನ ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top