ಗೋವಿಂದ ದಾಸ ಕಾಲೇಜಿನ ಯಕ್ಷಗಾನ ಸ್ಪರ್ಧೆ ಯಕ್ಷಯಾನ – 2023 ಉದ್ಘಾಟನೆ

Upayuktha
0

 

ಸುರತ್ಕಲ್: ದೈವಿಕ ಕಲೆಯಾದ ಯಕ್ಷಗಾನದ ಮೂಲಕ ಮಾನವೀಯ ಮೌಲ್ಯಗಳ ಪ್ರಸಾರವಾಗುತ್ತಿದೆ. ವಿದ್ಯಾರ್ಥಿಗಳು ಯಕ್ಷಗಾನ ಕಲೆಯ ಕುರಿತು ಆಸಕ್ತರಾಗುತ್ತಿರುವುದು ಶ್ಲಾಘನೀಯ ಎಂದು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮುಕ್ತೇಸರ ವೇದಮೂರ್ತಿ ಐ ರಮಾನಂದ ಭಟ್ ನುಡಿದರು. ಅವರು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಆಶ್ರಯದಲ್ಲಿ ನಡೆಯುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ನಾಲ್ಕು ದಿವಸಗಳ ಅಂತರ್ ಕಾಲೇಜು ತೆಂಕುತಿಟ್ಟು ಮತ್ತು ಬಡಗುತಿಟ್ಟು ಯಕ್ಷಗಾನ ಸ್ಪರ್ಧೆ ಯಕ್ಷಯಾನ – 2023ನ್ನು ಉದ್ಘಾಟಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ಹೆಚ್. ಮಾತನಾಡಿ ವಿದ್ಯಾದಾಯಿನೀ ಶಿಕ್ಷಣ ಸಂಸ್ಥೆಯು ಯಕ್ಷಗಾನದ ಶ್ರೇಷ್ಠ ಪರಂಪರೆ ಹೊಂದಿದ್ದು ಮೌಲ್ಯಧಾರಿತ ಶಿಕ್ಷಣವನ್ನು ಸದಾ ಪ್ರೋತ್ಸಾಹಿಸುತ್ತದೆ ಎಂದರು.


ಅಗರಿ ಎಂಟರ್ ಪ್ರೈಸಸ್‍ನ ಮಾಲಕ ಅಗರಿ ರಾಘವೇಂದ್ರ ರಾವ್ ಮಾತನಾಡಿ ಪರಿಪೂರ್ಣ ಕಲೆಯಾದ ಯಕ್ಷಗಾನವನ್ನು ಯುವ ತಲೆಮಾರಿಗೆ ಪರಿಚಯಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದಾಗಿದೆ ಎಂದರು.


ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ವೈ.ವಿ. ರತ್ನಾಕರ ರಾವ್, ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‍ನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಶುಭ ಹಾರೈಸಿದರು.


ಯಕ್ಷಯಾನ – ಯಕ್ಷಗಾನ ಸ್ಪರ್ಧೆಯ ಸಂಚಾಲಕ ಕಾಲೇಜಿನ ಉಪ ಪ್ರಾಚಾರ್ಯ ಪ್ರೊ. ರಮೇಶ್ ಭಟ್ ಎಸ್.ಜಿ ಸ್ವಾಗತಿಸಿದರು. ಉಪನ್ಯಾಸಕಿ ಶರ್ಮಿತಾ ಯು. ವಂದಿಸಿದರು. ಕ್ಯಾಪ್ಟನ್ ಸುಧಾ ಯು. ಮತ್ತು ಸುಶ್ಮಿತಾ ಬಿ.ಪಿ. ಕಾರ್ಯಕ್ರಮ ನಿರೂಪಿಸಿದರು.


ನಾಲ್ಕು ದಿವಸಗಳ   ಬಡಗುತಿಟ್ಟು-ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ 18 ಕಾಲೇಜುಗಳ ತಂಡಗಳು ಪಾಲ್ಗೊಳ್ಳುತ್ತಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top