ಮಂಗಳೂರು: ಹೊಸದಾಗಿ ನೊಂದಾವಣೆಗೊಂಡ ಗೃಹರಕ್ಷಕರಿಗೆ ಶ್ರೀ ಭಾರತೀ ಕಾಲೇಜು, ನಂತೂರು ಮಂಗಳೂರಿನಲ್ಲಿ ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ಶಿಬಿರ ಸೋಮವಾರ (ಏ.17) ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಜನರ ಜೀವ ಉಳಿಸಲು ಗೃಹರಕ್ಷಕರನ್ನು ತರಬೇತಿಗೊಳಿಸಿ ಅವರನ್ನು ಜೀವರಕ್ಷಕರನ್ನಾಗಿ ತಯಾರಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ. ಅಪಘಾತ ಅಥವಾ ಇನ್ನಾವುದೇ ಅವಘಡಗಳಾದಾಗ ತಕ್ಷಣವೇ ಸ್ಪಂದಿಸಲು ಈ ತರಬೇತಿ ಗೃಹರಕ್ಷಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರಾದ ಡಾ|| ರಿತೇಶ್ ಜೆ ಡಿಕುನ್ಹಾ, ಡಾ|| ದಿವ್ಯಾ ವಿನ್ಸೆಂಟ್, ಡಾ|| ಕಿಶನ್ ಶೆಟ್ಟಿ, ಶ್ರೀಮತಿ ಲವಿನಾ ನಝಾರೆತ್ ಮುಂತಾದವರು ಭಾಗವಹಿಸಿದ್ದರು.
ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್, ತರಬೇತುದಾರ ಚಂದನ್, ಹಿರಿಯ ಗೃಹರಕ್ಷಕರಾದ ಸುನಿಲ್, ಸುನಿಲ್ ಪೂಜಾರಿ, ರೇವತಿ, ಕನಕಪ್ಪ ಹಾಗೂ ಸುಮಾರು 58 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ