ತೆಂಕನಿಡಿಯೂರು ಕಾಲೇಜಿನಲ್ಲಿ ಐಸಿಐಸಿಐ ಬ್ಯಾಂಕ್‍ನ ಕ್ಯಾಂಪಸ್ ಡ್ರೈವ್

Upayuktha
0

 

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಉದ್ಯೋಗ ಮಾಹಿತಿ ಘಟಕ ಹಾಗೂ ಐಸಿಐಸಿಐ ಬ್ಯಾಂಕ್‍ನ ಸಂಯುಕ್ತ ಆಶ್ರಯದಲ್ಲಿ ಏ. 24 ರಂದು ಕ್ಯಾಂಪಸ್ ಡ್ರೈವ್ ಕಾರ್ಯಕ್ರಮ ನಡೆಯಿತು.

ಐಸಿಐಸಿಐ ಬ್ಯಾಂಕ್‍ನ ಹೆಚ್.ಆರ್. ಶ್ರೀ ಶಿವಕುಮಾರ್ ಅವರು ಬ್ಯಾಂಕ್‍ನಲ್ಲಿರುವ ವಿವಿಧ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅನಂತರ ಆಸಕ್ತ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಮಾಡಿ ಅದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಗುರುತಿಸಿ, ಬ್ಯಾಂಕ್‍ನ ಉದ್ಯೋಗಕ್ಕೆ ಸಂಬಂಧಿಸಿದಂತೆ ಅಂತಿಮ ಪಟ್ಟಿಯನ್ನು ತಯಾರಿಸಿದರು. ಸುಮಾರು 200 ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಂಡು ಅದರ ಸದುಪಯೋಗ ಪಡೆದುಕೊಂಡರು. 


ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಅವರು, ಬ್ಯಾಂಕ್‍ಗಳಲ್ಲಿ ವಿಫುಲವಾದ ಉದ್ಯೋಗಾವಕಾಶಗಳಿವೆ, ಅವುಗಳನ್ನು ವಿದ್ಯಾರ್ಥಿಗಳು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.


ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀ ತಿಮ್ಮಣ್ಣ ಜಿ. ಭಟ್, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಾಣಿಜ್ಯಶಾಸ್ತ್ರ ವಿಭಾಗ ಶ್ರೀಮತಿ ಬಿಂದು ಟಿ, ಡಾ. ಉದಯ ಶೆಟ್ಟಿ ಕೆ. ಉಪಸ್ಥಿತರಿದ್ದರು. 


ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಡಾ. ಎಚ್.ಕೆ. ವೆಂಕಟೇಶ ಸ್ವಾಗತಿಸಿದರು. ಶ್ರೀ ಉಮೇಶ್ ಪೈ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top