ಸುರತ್ಕಲ್ : ಯುವ ರೆಡ್ ಕ್ರಾಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕರ್ನಾಟಕ ರಾಜ್ಯ ಪ್ರತಿನಿಧಿ ಯತೀಶ್ ಬೈಕಂಪಾಡಿ ನುಡಿದರು.
ಅವರು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್‍ನ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ರೆಡ್ ಕ್ರಾಸ್‍ನ ಧ್ಯೇಯೊದ್ದೇಶಗಳನ್ನು ತಿಳಿಸಿ ವಿದ್ಯಾರ್ಥಿ ಸಮುದಾಯ ಯುವ ರೆಡ್ ಕ್ರಾಸ್ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ, ಉಪಪ್ರಾಂಶುಪಾಲ ರಮೇಶ್ ಭಟ್ ಎಸ್.ಜಿ. ಶುಭ ಹಾರೈಸಿದರು. ಅಶ್ವಿನ್ ಕುಮಾರ್ ಎಂ., ಧೀರಜ್ ಬಿ ಉದ್ಯಾವರ ಶ್ರೀಕಾಂತ್ ಸುರತ್ಕಲ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಮಂಗಳೂರು ಇಸ್ಕಾನ್‍ನ ಗುರು ಶ್ವೇತದೀಪದಾಸ್ ಸಮಾರೋಪ ಭಾಷಣ ಮಾಡಿ ಮೌಲ್ಯಾಧಾರಿತ ಸಾಮಾಜಿಕ ಸೇವಾ ಶಿಕ್ಷಣ ವಿದ್ಯಾರ್ಥಿಗಳಿಗೆ ಲಭ್ಯವಾಗಬೇಕೆಂದರು. ನಿವೃತ್ತ ಪ್ರಾಂಶುಪಾಲ ಡಾ.ಬಿ.ಮುರಳೀಧರ ರಾವ್ ಮುಖ್ಯ ಅತಿಥಿಗಳಾಗಿದ್ದರು.
2021-22ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಅತ್ಯುತ್ತಮ ಯುವ ರೆಡ್ ಕ್ರಾಸ್ ಸ್ವಯಂಸೇವಕ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ವರುಣ್ ಕಾಂಚನ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಪ್ರತೀಕ್ಷಾ ಸ್ವಾಗತಿಸಿದರು. ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಬಬಿತಾ ನವೀನ್ ಚಂದ್ರ, ಕಾರ್ಯದರ್ಶಿಗಳಾದ ಪ್ರಥ್ವೀರಾಜ್, ಪಲ್ಲವಿ, ರಶಿತಾ ಹಾಗೂ ಸಾಗರ್ ಸದಾನಂದ ದೇವಾಡಿಗ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ