ಚುನಾವಣೆ: ಪೂರ್ವ ಸಿದ್ದತೆಗೆ ನೋಡಲ್ ಅಧಿಕಾರಿಗಳಿಗೆ ಸೂಚನೆ

Upayuktha
0

ಮಂಗಳೂರು: ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯವಿರುವ ಪೂರ್ವ ಸಿದ್ಧತೆಗಳ ಬಗ್ಗೆ ಗಮನಹರಿಸಿ, ಅವುಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನಿರ್ದೇಶನ ನೀಡಿದರು.

 

ಅವರು ಏ.5ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆಗೆ ನಿಯೋಜನೆಗೊಂಡಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಈ ಅಧಿಕಾರಿಗಳು ಕರ್ತವ್ಯ ಹಾಗೂ ತಾವು ವಹಿಸಬೇಕಾದ ಪಾತ್ರದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರಬೇಕು, ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಚಾರ ಕಾರ್ಯಗಳು ಬಿರುಸು ಪಡೆಯುತ್ತವೆ ಈ ಸಂಬಂಧ ನಿಯೋಜಿತ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಆಗ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಸಿದ್ಧತೆಯನ್ನು ಈಗಲೇ ಮಾಡಿಟ್ಟುಕೊಳ್ಳಬೇಕು, ಸಿವಿಜಿಲ್, ಸುವಿಧಾ ಸೇರಿದಂತೆ ಮುಖ್ಯವಾಗಿ ತಕ್ಷಣದಲ್ಲೇ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತ ವಹಿಸಬೇಕು ಯಾವುದೇ ದೂರು ದಾಖಲಾದ ಕೂಡಲೇ ಅದಕ್ಕೆ ಪ್ರತಿಕ್ರಿಯೆ ನೀಡಲು ಸನ್ನದ್ಧರಾಗಬೇಕು, ಮಂಗಳೂರು ವಾಯು ಹಾಗೂ ಜಲ ಮಾರ್ಗ ಹೊಂದಿರುವ ಕಾರಣ ಹೊರಗಿನಿಂದ ಬರಬಹುದಾದ ವಸ್ತುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸಿಪಿ ಅಂಶು ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚೆನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ ಸೇರಿದಂತೆ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಸಭೆಯಲ್ಲಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top