ನಾಳೆ (ಏ. 27) ಜಯನಗರ ರಾಯರ ಮಠದಲ್ಲಿ "ದಾಸವಾಣಿ"

Upayuktha
0


ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 27, ಗುರುವಾರ ಸಂಜೆ 7-30ಕ್ಕೆ, ಶ್ರೀ ಸುಧಾಕರ ಶೆಟ್ಟಿ, ಶ್ರೀ ಆತ್ಮಾರಾಮ್ ಆಳ್ವ ಮತ್ತು ಸಂಗಡಿಗರಿಂದ "ದಾಸವಾಣಿ" ಕಾರ್ಯಕ್ರಮ ಏರ್ಪಡಿಸಿದೆ.

ಈ ಕಾರ್ಯಕ್ರಮದಲ್ಲಿ ಅತಿಥಿ ಗಾಯಕರಾಗಿ ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ರಮೇಶ್ ಚಂದ್ರ ಅವರು ಭಾಗವಹಿಸಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top