ಹೊಸದಿಲ್ಲಿ: ಕರ್ನಾಟಕದ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು 2 ದಿನಗಳು ಉಳಿದಿರುವಂತೆಯೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಒಟ್ಟು 31 ಜಿಲ್ಲೆಗಳ 224 ವಿಧಾನಸಭಾ ಕ್ಷೇತ್ರಗಳ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಏ.11 ಮಂಗಳವಾರ) ಬಿಡುಗಡೆ ಮಾಡಲಾಯಿತು. ಇನ್ನು ಉಳಿದ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಬೇಕಿದೆ.
52 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಬಿಜೆಪಿ ಹೈಕಮಾಂಡ್ ಸತತ ಹಲವು ಸುತ್ತಿನ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಕೆಲವು ಹಿರಿಯ ನಾಯಕರಿಗೆ ನಿವೃತ್ತಿಯ ದಾರಿ ತೋರಿಸಲಾಗಿದ್ದು, ಯುವ ನಾಯಕರನ್ನು ಬೆಳೆಸುವತ್ತ ಗಮನ ಹರಿಸಿದೆ.
ಸ್ಥಳೀಯ ಮಟ್ಟದ ಕಾರ್ಯಕರ್ತರಿಂದ ಹಿಡಿದು ರಾಜ್ಯ ನಾಯಕರ ವರೆಗೆ ಅಭಿಪ್ರಾಯಗಳನ್ನು ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಕರ್ನಾಟಕ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ