ತೀರ್ಥಹಳ್ಳಿ: ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರು ಇಂದು ಬೆಳಗ್ಗೆ (ಏ.18, ಮಂಗಳವಾರ) ತೀರ್ಥಹಳ್ಳಿಯ ಶ್ರೀ ಭಕ್ತಾಂಜನೇಯ ದೇವಸ್ಥಾನದಿಂದ ಹೊರಟು ಸಹಸ್ರಾರು ಕಾರ್ಯಕರ್ತರ ಜೊತೆ ಮೆರವಣಿಗೆ ಮೂಲಕ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರವನ್ನು ಸಲ್ಲಿಸಿ ಬಾಳಬೈಲು ಮೈದಾನದಲ್ಲಿ ಬೃಹತ್ ಸಭೆಯಲ್ಲಿ ಪಾಲ್ಗೊಂಡರು. ಸಭೆಯನ್ನು ಉದ್ದೇಶಿಸಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು, ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಅಣ್ಣಾಮಲೈಯವರು ಜಿಲ್ಲಾ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರರವರು, ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರರವರು, ಮಾಜಿ ಶಾಸಕರಾದ ಸ್ವಾಮಿ ರಾವ್,ರವರು ಮಾತನಾಡಿದರು.
ಈ ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್ ರುದ್ರೇ ಗೌಡ್ರು, ಭಾರತಿ ಶೆಟ್ಟಿ, ಮಂಡಲ ಅಧ್ಯಕ್ಷರಾದ ರಾಘವೇಂದ್ರ ಬಾಳೆಬೈಲು, ಜಿಲ್ಲಾ ಪ್ರದಾನ ಕಾರ್ಯದರ್ಶಿ ನವೀನ್ ಹೆದ್ದೂರು ತೀರ್ಥಹಳ್ಳಿ ಚುನಾವಣಾ ಪ್ರಭಾರಿ ಮಟ್ಟಾರ್ ರತ್ನಾಕರ್ ಹೆಗ್ಡೆ , ಪ್ರಮುಖರಾದ ಮೋಹನ್, ನಾಗರಾಜ್ ಶೆಟ್ಟಿ, ಮದನ್, ಬೇಗುವಳ್ಳಿ ಸತೀಶ್, ರಮ್ಯಾ ಅನಿಲ್, ಎನ್ ಡಿ ಸತೀಶ್, ಕಿರಣ್ ಕುಮಾರ್ ಚುನಾಯಿತ ಪ್ರತಿನಿಧಿಗಳು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ