ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗ ನಾಳೆ ಉದ್ಘಾಟನೆ

Upayuktha
0

ಮಂಗಳೂರು: ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಮಾಧ್ಯಮ ಕೇಂದ್ರ- ಮಂಗಳೂರು ವಿಭಾಗವು ನಾಳೆ (ಏ.10, ಸೋಮವಾರ) ಮಧ್ಯಾಹ್ನ 12:30ಕ್ಕೆ ಉದ್ಘಾಟನೆಗೊಳ್ಳಲಿದೆ.


ರಾಷ್ಟ್ರೀಯ ಬಿಜೆಪಿ ವಕ್ತಾರರಾದ ಶ್ರೀ ಗೌರವ್ ಭಾಟಿಯಾ ಅವರು ಸುಸಜ್ಜಿತ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪಕ್ಷದ ಶಾಸಕರು ಸೇರಿದಂತೆ ಹಲವು ಗಣ್ಯರು ಮತ್ತು ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.


ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಂತೆ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರವಾಗಿ ಈ ಕೇಂದ್ರ ಕಾರ್ಯಾಚರಿಸಲಿದೆ.


ನಗರದ ಲಾಲ್‌ಬಾಗ್‌ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ನಲ್ಲಿ ವಿಭಾಗ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top