|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಆಳ್ವಾಸ್‌ನ ಅನನ್ಯ ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಆಳ್ವಾಸ್‌ನ ಅನನ್ಯ ರಾಜ್ಯಕ್ಕೆ ಪ್ರಥಮ


ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಎಂದಿನಂತೆ ದಕ್ಷಿಣ ಕನ್ನಡ ಮೊದಲ ಸ್ಥಾನ ಹಾಗೂ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿವೆ. ಕೊಡಗು ಮೂರನೇ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿವೆ.


ಕಲಾ ವಿಭಾಗದಲ್ಲಿ ತಬಸ್ಸುಮ್ ಶೇಖ್‌ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ.


ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಒಟ್ಟು 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷ ರಾಮಚಂದ್ರನ್ ಈ ಮಾಹಿತಿ ನೀಡಿದರು.


ಒಟ್ಟು 5,24,209 (ಶೇ.74.67)  ವಿದ್ಯಾರ್ಥಿಗಳು  ಉತ್ತೀರ್ಣರಾಗಿದ್ದು, ಉನ್ನತ ಶ್ರೇಣಿಯಲ್ಲಿ 1,09,509 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ಪ್ರಥಮ ದರ್ಜೆಯಲ್ಲಿ 2,47,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು 90,014 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸ್ ಆಗಿದ್ದರೆ, 77,371 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.


ಫಲಿತಾಂಶವನ್ನು https://karresults.nic.in/ ಜಾಲತಾಣದಲ್ಲಿ ವೀಕ್ಷಿಸಬಹುದೆಂದು ಕರ್ನಾಟಕ ಶಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم