ಮಹಾರಾಷ್ಟ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 11 ಮಂದಿ ಸಾವು; ಪರಿಹಾರ ಘೋಷಣೆ

Upayuktha
0


ಮುಂಬಯಿ: 
ಮಹಾರಾಷ್ಟ್ರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ 11ಕ್ಕೂ ಹೆಚ್ಚು ಜನರು ಬಿಸಿಲಿನ ಝಳದಿಂದಾಗಿ ಸಾವಿಗೀಡಾಗಿದ್ದಾರೆ.

ದತ್ತಾತ್ರಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರದ ಖಾರ್ ಘರ್ ನಲ್ಲಿ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪ್ರದಾನ ಮಾಡಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಸೇರಿದಂತೆ ಹಲವು ಗಣ್ಯ.ರು ಭಾಗವಹಿಸಿದ್ದರು.

300 ಎಕರೆ ಪ್ರದೇಶದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿದ್ದರು. ಬಿಸಿಲಿನ ಝಳ ತೀವ್ರವಾಗಿದ್ದರಿಂದಾಗಿ ಬಹಳಷ್ಟು ಜನರು ತೀವ್ರ ಅಸ್ವಸ್ಥರಾಗಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳ್ಳಂಬೆಳಗ್ಗೆಯೇ ಜನ ಜಮಾಯಿಸಿದ್ದರು. ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು. ತಕ್ಷಣವೇ ಅವರಲ್ಲಿ ಹಲವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಆದರೆ ರಾತ್ರಿಯವರೆಗೆ 11 ಜನರು ಸಾವಿಗೀಡಾಗಿದ್ದನ್ನು ಖಚಿತಪಡಿಸಲಾಗಿದೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ.

ಮೃತರಾದವರಿಗೆ ಮಹಾರಾಷ್ಟ್ರ ಸರಕಾರ ಪರಿಹಾರ ಘೋಷಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top