ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾವೀರ ಜಯಂತಿ ಆಚರಣೆ

Upayuktha
0

ಉಡುಪಿ:  ಪ್ರಕೃತಿ  ಸಕಲ ಜೀವಿಗಳಿಗೂ ಬದುಕು ಹಕ್ಕನ್ನು ನೀಡಿದೆ. ನಾವು ನಮ್ಮ ಜೀವನದಲ್ಲಿ ಮಹಾವೀರರ ಐದು ಪಂಚ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗ್ರಹ, ಆಚೌರ್ಯ ಮತ್ತು ಬ್ರಹ್ಮಚರ್ಯ ಪಾಲಿಸಿದಾಗ ಪ್ರಕೃತಿಗೆ ಪೂರಕವಾದ ಮಾನವ ಧರ್ಮ ಸಮಾಜದಲ್ಲಿ ನೆಲೆಗೊಳ್ಳುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ರವರು ಹೇಳಿದರು.


ಅವರು ನಿನ್ನೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. 


ಭಗವಾನ್ ಮಹಾವೀರರು ಶಾಂತಿ ಸೌಹಾರ್ದತೆಯನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯಗಳು ಸುಧಾರಿಸಲು ಮಾರ್ಗದರ್ಶನವನ್ನು ನೀಡಿದ್ದಾರೆ ,ಅವುಗಳನ್ನು ಎಲ್ಲರೂ  ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ಹೇಳಿದರು. 

 

ಕಾರ್ಯಕ್ರಮದಲ್ಲಿ ಜೈನ ಮಿಲನ್ ನ ವಿನೋದ ಪ್ರಸನ್ನ ಕುಮಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಸುರೇಂದ್ರ ಅಡಿಗ ಮಹಾವೀರರ ಕುರಿತು ಮಾತನಾಡಿದರು. ಜೈನ ಮಿಲನ್ ಅಧ್ಯಕ್ಷರಾದ ದೀಪ ರಾಜೇಶ್, ಸುಧೀರ್ ಜೈನ್, ಕನ್ನಡ ಸಾಹಿತ್ಯ ಪರಿಷತ್ ನ ರವಿರಾಜ್, ನರಸಿಂಹ ಮೂರ್ತಿ, ಜಿಲ್ಲಾ ಕಾರ್ಮಿಕಾಧಿಕಾರಿ ಕುಮಾರ್, ಸಮುದಾಯದ ಸದಸ್ಯರು ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಜೈನ್ ಮಿಲನ್ ನ ಪ್ರಸನ್ನ ಕುಮಾರ್ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top