ಮಂಗಳೂರು: ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ‘ಮತ ಪೆಟ್ಟಿಗೆ' ಕೃತಿಯ ಬಿಡುಗಡೆ ಸಮಾರಂಭ ಏ.5ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ.
ಜಿ.ಆರ್.ಮೆಡಿಕಲ್ ಕಾಲೇಜ್, ಆಸ್ಪತ್ರೆ ಹಾಗೂ ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್.ಗಣೇಶ್ ರಾವ್ ಅವರು ಕೃತಿ ಬಿಡುಗಡೆ ಮಾಡಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ರೆಡ್‌ಕ್ರಾಸ್ ಸೊಸೈಟಿಯ ದ.ಕ. ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ, ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ