ಮತ ಚಲಾವಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಡಾ. ಆಶಾಲತಾ ಪಿ.

Upayuktha
0

 


ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರೀಕನು ಅತ್ಯಂತ ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು,ಎಂದು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಡಾ. ಆಶಾಲತಾ ಪಿ. ಹೇಳಿದರು. 


ಶ್ರೀ ಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ ಮಂಗಳೂರು ಇದರ ಐಕ್ಯೂಎಸಿ, ಎನ್.ಎಸ್.ಎಸ್ ಮತ್ತು ಸ್ವೀಪ್ ನ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 


ಪ್ರಾಂಶುಪಾಲರಾದ ಡ.| ಆಶಾಲತಾ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡೀನ್ ಅಕಾಡೆಮಿಕ್ ಡಾ. ಉಮ್ಮಪ್ಪ ಪೂಜಾರಿ, ರಾಜ್ಯಶಾಸ್ತ್ರ ಉಪನ್ಯಾಸಕರು ಸಂದೀಪ್ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.


ಎನ್.ಎಸ್.ಎಸ್ ಯೋಜನಾಧಿಕಾರಿ ಯತೀನ್ ಸ್ವಾಗತಿಸಿದರು. ಅಕ್ಷಿತಾ ವಂದಿಸಿದರು. ವೈಷ್ಣವಿ  ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Advt Slider:
To Top