ಮಂಗಳೂರಿನಲ್ಲಿ ನಾಳೆ (ಏ.29) ಅಮಿತ್‌ ಶಾ ಅವರಿಂದ ಬೃಹತ್ ರೋಡ್‌ ಶೋ

Upayuktha
0

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.


ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ.


ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.


ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.


ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.


ಅಣ್ಣಾಮಲೈ ಪುತ್ತೂರು, ವಿಟ್ಲಕ್ಕೆ:

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಪುತ್ತೂರಿನಲ್ಲಿ ಹಾಗೂ ಸಂಜೆ 6 ಗಂಟೆಗೆ ವಿಟ್ಲದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top