ಮಂಗಳೂರು ವಿಶ್ವವಿದ್ಯಾನಿಲಯ: ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Upayuktha
0




ಮಂಗಳೂರು: ಶೈಕ್ಷಣಿಕ ವರ್ಷ 2022-23ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮಂಗಳ ಗಂಗೋತ್ರಿ ಇಲ್ಲಿ ನಡೆಸಲಾಗುವ ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮದ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಪ್ರಕ್ರಿಯೆಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್‌ ಮೂಲಕ ನಡೆಸಲಾಗುವುದು. UUCMS ಗೆ ಸಂಬಂಧಿಸಿದ ಎಲ್ಲಾ ಮಾಹಿತಿ https://mangaloreuniversity.ac.in/mu-uucms ನಲ್ಲಿ ಲಭ್ಯವಿದೆ.


ಆಸಕ್ತ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ UUCMS ಪೋರ್ಟಲ್‌ ಮೂಲಕ ಆನ್‌ಲೈನ್‌ನಲ್ಲಿ ಎಪ್ರಿಲ್‌ 22, 2023 ರೊಳಗೆ ಅರ್ಜಿ ಸಲ್ಲಿಸುವುದು. ವಿವರವಾದ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ www.mangaloreuniversity.ac.in ದಿಂದ ಪಡೆದುಕೊಳ್ಳಬಹುದು ಅಥವಾ ಎಂ.ಎಡ್‌ ಸ್ನಾತಕೋತ್ತರ ಕಾರ್ಯಕ್ರಮದ ಸಂಯೋಜಕರನ್ನು ಸಂಪರ್ಕಿಸಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top