ರಕ್ತದಾನವೇ ಶ್ರೇಷ್ಠದಾನ: ಡಾ. ಚೂಂತಾರು

Upayuktha
0

ಮಂಗಳೂರು: ರಕ್ತದಾನದಷ್ಟು ಪವಿತ್ರವಾದ ಮತ್ತು ಶ್ರೇಷ್ಠವಾದ ದಾನ ಇನ್ನೊಂದಿಲ್ಲ. ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ 4 ಜನರ ಜೀವ ಉಳಿಸುವ ಶಕ್ತಿ ಇದೆ. ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರೋಗಿಯ ಜೀವ ಉಳಿಸಲು ಬೇಕಾದ ರಕ್ತವನ್ನು ದಾನಿಗಳಿಂದಲೇ ಪಡೆಯಬೇಕಾದ ಅನಿವಾರ್ಯತೆ ಇದೆ. ಬೇಸಿಗೆಯ ಸಂದರ್ಭದಲ್ಲಿ ರಕ್ತದ ಅಭಾವ ಬರುವುದು ಸಹಜ. ಈ ಹಿನ್ನಲೆಯಲ್ಲಿ ಹೆಚ್ಚು ಹೆಚ್ಚು ಯುವಕರು ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನ ಮಾಡುವುದರಿಂದ ತಮ್ಮ ಆರೋಗ್ಯ ವೃದ್ಧಿಸುತ್ತದೆ ಮತ್ತು ಇನ್ನೊಬ್ಬರ ಜೀವ ಉಳಿಸಿದ ಸಾರ್ಥಕತೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಡಾ. ಮುರಲೀ ಮೋಹನ್ ಚೂಂತಾರು ನುಡಿದರು.


ದಿನಾಂಕ 28-04-2023ನೇ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ತೇಜಸ್ವಿನಿ ಆಸ್ಪತ್ರೆ ಇದರ ಸಹಕಾರದೊಂದಿಗೆ, ದ.ಕ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆ ದ.ಕ ಜಿಲ್ಲೆ ಇದರ ವತಿಯಿಂದ ಲಯನ್ಸ್ ಕ್ಲಬ್ ಮಂಗಳೂರು ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಜರುಗಿತು.


ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಗುರುಪ್ರೀತ್ ಆಳ್ವ ಅವರು ಮಾತನಾಡಿ, ರಕ್ತದಾನ ನಿರಂತರವಾಗಿ ನಡೆಯುತ್ತಲೇ ಇರಬೇಕು. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ವ್ಯಕ್ತಿಯ ಆರೋಗ್ಯ ವೃದ್ಧಿಸುತ್ತದೆ ಮತ್ತು ರೋಗಿಯ ಜೀವ ಕೂಡಾ ಉಳಿಯುತ್ತದೆ. ಈ ಹಿನ್ನಲೆಯಲ್ಲಿ ಎಲ್ಲರೂ ರಕ್ತದಾನಕ್ಕೆ ಮುಂದಾಗಲೇ ಬೇಕು ಎಂದು ಕರೆ ನೀಡಿದರು.


ಈ ಸಂದರ್ಭದಲ್ಲಿ ಉಪ ಸಮಾದೇಷ್ಟ ಶ್ರೀ ರಮೇಶ್, ಲಯನ್ಸ್ ಕ್ಲಬ್ ಮಂಗಳೂರು ಇದರ ಕಾರ್ಯದರ್ಶಿ ಶ್ರೀಮತಿ ಇಂದಿರಾ ಶೆಟ್ಟಿ, ಖಜಾಂಜಿ ಶ್ರೀ ಅರುಣ್ ಪೀಟರ್ ಪಿಂಟೋ, ತೇಜಸ್ವಿನಿ ಆಸ್ಪತ್ರೆಯ ವೈದ್ಯ ಡಾ. ವಾಸುದೇವ ಪ್ರಭು ಉಪಸ್ಥಿತರಿದ್ದರು. ಸುಮಾರು 20 ಮಂದಿ ಗೃಹರಕ್ಷಕರು ರಕ್ತದಾನ ಮಾಡಿದರು. ತೇಜಸ್ವಿನಿ ಆಸ್ಪತ್ರೆಯ ವೈದ್ಯರು ಮತ್ತು ತಂತ್ರಜ್ಞರು ಈ ಶಿಬಿರವನ್ನು ನಡೆಸಿಕೊಟ್ಟರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top