ಪಣಜಿ: ಗೋವಾದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕನ್ನಡಿಗರು ನೆಲೆಸಿದ್ದಾರೆ. ಗೋವಾದಲ್ಲಿ ನೆಲೆಸಿರುವ ಹಲವರ ಮತದಾನ ಗುರುತಿನ ಚೀಟಿ ಕರ್ನಾಟಕದ್ದೇ ಆಗಿದೆ. ಮೇ 10 ರಂದು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ ನೀಡಿ ಅಧಿಕಾರಕ್ಕೆ ತಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವವನ್ನು ಬೆಂಬಲಿಸಬೇಕು ಎಂದು ಗೋವಾ ರಾಜ್ಯ ತೋಟಗಾರಿಕಾ ಇಲಾಖೆಯ ಸಚಿವ ಪ್ರೇಮೇಂದ್ರ ಶೇಟ್ ಮನವಿ ಮಾಡಿದರು.
ಗೋವಾದ ಬಿಚೋಲಿಯಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ ರವರ ಹುಟ್ಟು ಹಬ್ಬದ ಅಂಗವಾಗಿ ಬಿಚೋಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆರೆದಿದ್ದ ಕನ್ನಡಿಗರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಕರ್ನಾಟಕದಲ್ಲಿ ಬಿಜೆಪಿಯ ಪರ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ನಾನೂ ತೆರಳಲಿದ್ದೇನೆ. ಅಭಿವೃದ್ಧಿಯ ದೃಷ್ಠಿಯಿಂದ ಎಲ್ಲರೂ ಬಿಜೆಪಿಗೆ ಮತ ಹಾಕಬೇಕು. ಕರ್ನಾಟಕದಲ್ಲಿ ಮತದಾನದ ಹಕ್ಕು ಹೊಂದಿರುವ ಗೋವಾದಲ್ಲಿರುವ ಎಲ್ಲ ಕನ್ನಡಿಗರು ಖಡ್ಡಾಯವಾಗಿ ಕರ್ನಾಟಕಕ್ಕೆ ತೆರಳಿ ತಮ್ಮ ಅಮೂಲ್ಯವಾದ ಮತ ಚಲಾಯಿಸಬೇಕು ಎಂದು ಸಚಿವ ಪ್ರೆಮೇಂದ್ರ ಶೇಟ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ ಮಾತನಾಡಿ- ದೇಶದ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ಬಿಜೆಪಿಯನ್ನು ಬೆಂಬಲಿಸಿ ಮತ ಚಲಾಯಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಿಗರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ