ಬದಿಯಡ್ಕ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಶಾಲಾ ವರ್ಧಂತ್ಯುತ್ಸವವು ಶುಕ್ರವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಬೆಳಗ್ಗೆ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಎಸ್.ಎನ್.ರಾವ್ ಮುನ್ನಿಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.
ಅಪರಾಹ್ನ ನಡೆದ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಎಚ್. ಶಿವರಾಮ ಭಟ್ ಕಾರಿಂಜ ಹಳೆಮನೆ ವಿದ್ಯಾರ್ಥಿಗಳ ಹಸ್ತಪ್ರತಿ `ಬೆಳಕು' ಬಿಡುಗಡೆಗೊಳಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಮುಜುಂಗಾವು, ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ, ಮುಳ್ಳೇರಿಯ ಹವ್ಯಕ ಮಂಡಲಾಧ್ಯಕ್ಷ ಬಾಲಸುಬ್ರಹ್ಮಣ್ಯ ಸರ್ಪಮಲೆ ಮಾತನಾಡಿದರು. 6ನೇ ವಿದ್ಯಾರ್ಥಿನಿ ಕನಿಹ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮಭಟ್ ದರ್ಬೆಮಾರ್ಗ ಧನ್ಯವಾದವನ್ನಿತ್ತರು. 10ನೇ ತರಗತಿಯ ಮನೀಶ್ ಕುಮಾರ್ ಯು.ಎಚ್.ನಿರೂಪಿಸಿದರು. ಅಧ್ಯಾಪಿಕೆ ಚಿತ್ರಾಸರಸ್ವತಿ ವರದಿ ವಾಚಿಸಿದರು. ಬೆಳ್ಳಿಪ್ಪಾಡಿ ಮನೆಯವರು, ಪಂಜಿಗುಡ್ಡೆ ಮನೆಯವರು, ಕೋಂಗೋಟು ಮನೆಯವರು, ಶಾಲಾ ಗ್ರಂಥಪಾಲಿಕೆ ವಿಜಯಾಸುಬ್ರಹ್ಮಣ್ಯ ಹಾಗೂ ವೇದಮೂರ್ತಿ ಕೋಣಮ್ಮೆ ಮಹಾದೇವಭಟ್ಟರು ಕೊಡಮಾಡುವ ದತ್ತಿನಿಧಿ ಪುರಸ್ಕಾರಗಳನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಳೆದ ಶೈಕ್ಷಣಿಕ ವರ್ಷಗಳಲ್ಲಿ 10ನೇ ತರಗತಿಯಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ