ನ್ಯಾಚುರೋಪತಿ: ಆಳ್ವಾಸ್ ಕಾಲೇಜಿಗೆ 5 ರ್‍ಯಾಂಕ್

Upayuktha
0

ಮೂಡುಬಿದಿರೆ:  ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ್‍ಯಾಂಕ್  ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ವಿದ್ಯಾರ್ಥಿನಿ ರ್‍ಯಾಂಕ್ ಪಡೆದಿದ್ದಾರೆ. 


ಸ್ನಾತಕೋತ್ತರ  ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ  ತೃತೀಯ ಹಾಗೂ ಡಾ. ಅಸ್ನಾ ಅನ್ನಾ ಜೋಸ್ ಎಂಟನೇ ರ್‍ಯಾಂಕ್ ಪಡೆದಿದ್ದಾರೆ. ಎಂ.ಡಿ. ಕ್ಲಿನಿಕಲ್ ಯೋಗದಲ್ಲಿ ಡಾ.ದಿವ್ಯಶ್ರೀ ಎಂ.ಎನ್. ಆರನೇ ರ್‍ಯಾಂಕ್ ಪಡೆದಿದ್ದಾರೆ. 


ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಪದವಿಯಲ್ಲಿ ಶ್ರುತಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. 


ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ವನಿತಾ ಶೆಟ್ಟಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ  ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲೆ ಡಾ ವನಿತಾ ಶೆಟ್ಟಿ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top