ಮಂಗಳೂರು: ಮತದಾನಕ್ಕೆ ವೇತನ ಸಹಿತ ರಜೆಗೆ ಸೂಚನೆ

Upayuktha
0

ಮಂಗಳೂರು: ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮೇ.10ರ ಬುಧವಾರ ಮತದಾನಕ್ಕೆ ನಿಗದಿಪಡಿಸಿದೆ.

      

ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಕಲಂ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿಕೊಡಬೇಕು.

      

ಆದ ಕಾರಣ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮೇ.10ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top