ಮಾಜಿ ಸಚಿವ ಈಶ್ವರಪ್ಪನವರಿಗೆ ಕರೆ ಮಾಡಿದ ಪ್ರಧಾನಿ ಮೋದಿ

Upayuktha
0


 

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಇಂದು ಬೆಳಗ್ಗೆ ಸ್ವತಃ ಕರೆ ಮಾಡಿ ಮಾತನಾಡಿದರು.


ವಿಧಾನಸಭೆ ಚುನಾವಣೆಗೆ ಟಿಕೆಟ್‌ ಹಂಚಿಕೆ ವೇಳೆ ಕಡೆಗಣಿಸಲ್ಪಟ್ಟ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅಸಮಾಧಾನಿತರನ್ನು ಸಾಂತ್ವನಪಡಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ವಿಭಿನ್ನ ತಂತ್ರಗಳನ್ನು ಅನುಸರಿಸುತ್ತಿದೆ.


ಮಾಜಿ ಸಚಿವ ಈಶ್ವರಪ್ಪ ಅವರು ಪಕ್ಷ ನಿಷ್ಠೆಯನ್ನು ಪ್ರದರ್ಶಿಸಿ ಘೋಷಿತ ಅಭ್ಯರ್ಥಿಯ ಗೆಲುವಿಗೆ ಸಂಪೂರ್ಣ ಶ್ರಮ ವಹಿಸಿ ದುಡಿಯುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರು ಬೆಳಗ್ಗೆ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು. ಈಶ್ವರಪ್ಪನವರ ಪ್ರಬುದ್ಧ ರಾಜಕೀಯ ನಡೆಯನ್ನು ಪ್ರಧಾನಿ ಶ್ಲಾಘಿಸಿದರು. ನಿಮ್ಮ ಜತೆಗ ಪಕ್ಷ ಸದಾ ಇರಲಿದೆ ಎಂದು ಭರವಸೆ ನೀಡಿದ್ದಾರೆ.


ಪ್ರಧಾನಿ ಕರೆ ಮಾಡಿದ ವಿಚಾರವನ್ನು ಸಂತಸದಿಂದ ಹಂಚಿಕೊಂಡಿರುವ ಈಶ್ವರಪ್ಪನವರು, ಮೋದಿಯವರೇ ಕರೆ ಮಾಡಿದ್ದು ಅಚ್ಚರಿಯಾಯಿತು. ವಿಶ್ವಮಾನ್ಯ ನಾಯಕರಾಗಿರುವ ಅವರು ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಮಾತನಾಡಿಸಿರುವುದು ಬಹಳ ಖುಷಿ ತಂದಿದೆ. ಇದು ಎಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಈಶ್ವರಪ್ಪ ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top