ಅಡ್ಯನಡ್ಕ: ಜನತಾ ಪದವಿ ಪೂರ್ವ ಕಾಲೇಜು ಅಡ್ಯನಡ್ಕ, 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿರುತ್ತದೆ.
ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 80 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಅದರಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 53 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಿಜ್ಞಾನ ವಿಭಾಗದ ಶರಣ್ಯ ಕುಮಾರಿ ಬಿ ಇವರು 576 (96%) ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ 15 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ 15 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಇದರಲ್ಲಿ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ 52 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ 52 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಇದರಲ್ಲಿ ಏಳು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಕಲಾ ವಿಭಾಗದಲ್ಲಿ 13 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಇದರಲ್ಲಿ 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಸಂಚಾಲಕರು, ಇತರ ಪದಾಧಿಕಾರಿಗಳು, ಸಂಸ್ಥೆಯ ಮುಖ್ಯಸ್ಥರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ