ಪರಾರಿಗುತ್ತು ಬಾಲಕೃಷ್ಣ ಶೆಟ್ಟಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ

Upayuktha
0

ಕಲೆ-ಕಲಾವಿದರದು ಅವಿನಾಭಾವ ಸಂಬಂಧ: ಭಾಸ್ಕರ ರೈ ಕುಕ್ಕುವಳ್ಳಿ



ಮಂಗಳೂರು: 'ಕಲೆಯಿಂದಾಗಿ ಕಲಾವಿದನಿಗೆ ಬದುಕು; ಕಲಾವಿದನಿಂದ ಕಲೆಗೆ ಬೆಳಕು. ಆದ್ದರಿಂದ ಕಲೆ ಮತ್ತು ಕಲಾವಿದರ ನಡುವೆ ಅವಿನಾಭಾವ ಸಂಬಂಧವಿದೆ' ಎಂದು ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಹಾಗೂ ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು.


ಬಂಟ್ವಾಳ ತಾಲೂಕು ಪರಾರಿ ಗುತ್ತು ಮನೆವಠಾರದಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಸಂದರ್ಭ ಏರ್ಪಡಿಸಲಾದ ಪರಾರಿಗುತ್ತು ಬಾಲಕೃಷ್ಣ ಶೆಟ್ಟಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. 


'ಹಿರಿಯರನ್ನು ಗೌರವಿಸುವುದು ಮತ್ತು ಕಲೆಯನ್ನು ಆರಾಧಿಸುವುದು ಇವೆರಡೂ ಪವಿತ್ರ ಕಾರ್ಯಗಳು' ಎಂದವರು ಬಯಲಾಟದ ಸೇವಾದಾರರನ್ನು ಅಭಿನಂದಿಸಿದರು. ಪೊಳಲಿ ಶ್ರೀ ರಾಮಕೃಷ್ಣ ತಪೋವನ ಆಶ್ರಮದ ಸ್ವಾಮಿ ವಿವೇಕಾ ಚೈತನ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ರತ್ನಾಕರ ಶೆಟ್ಟಿ ಮುಂಡಡ್ಕ ಗುತ್ತು ಮತ್ತು ರಾಮಕೃಷ್ಣ ಆಳ್ವ ಪೊನ್ನೋಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಸಂಸ್ಮರಣೆ - ಪ್ರಶಸ್ತಿ ಪ್ರದಾನ:

ಮಂಗಳೂರು ಕೆನರಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಜಿ. ಶಂಕರ ಶೆಟ್ಟಿ ಗುಂಡಿಲಗುತ್ತು ದಿ. ಬಾಲಕೃಷ್ಣ ಶೆಟ್ಟರ ಕುರಿತು ಸಂಸ್ಮರಣಾ ಭಾಷಣ ಮಾಡಿದರು. ಹಿರಿಯ ವೈದಿಕ ವಿದ್ವಾಂಸ ಹಾಗೂ ಕೊಳಕೆ ದೇವಳದ ಪ್ರಧಾನ ಅರ್ಚಕ ಮಹಾಬಲೇಶ್ವರ ಮಯ್ಯ ಮತ್ತು ಕಟೀಲು 2ನೇ ಮೇಳದ ಪ್ರಬಂಧಕ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಶ್ರೀಧರ ಪಂಜಾಜೆಯವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.


ಬಯಲಾಟದ ಸೇವಾ ಕರ್ತರಾದ ದಿವಾಕರ ಶೆಟ್ಟಿ ಪರಾರಿ ಗುತ್ತು ಸ್ವಾಗತಿಸಿದರು. ಪಿ. ಕಿಶೋರ್ ಭಂಡಾರಿ ಬೆಳ್ಳೂರು ಸನ್ಮಾನ ಪತ್ರ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಶಂಕರ್ ಶೆಟ್ಟಿ ಪರಾರಿಗುತ್ತು ವಂದಿಸಿದರು. ಕಟೀಲು ಮೇಳದ ಕಲಾವಿದರಿಂದ 'ಶ್ರೀದೇವಿ ಮಹಾತ್ಮೆ' ಯಕ್ಷಗಾನ ಬಯಲಾಟ ಜರಗಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top