ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಉದ್ಯೋಗ ಮಾಹಿತಿ ಘಟಕದ ವತಿಯಿಂದ ಏ. 15 ರಂದು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರೋಮನ್ ಟೆಕ್ನಾಲಜಿಸ್ ಪ್ರೈ. ಲಿಮಿಟೆಡ್ ಸಂಸ್ಥೆಯ ತರಬೇತುದಾರರಾದ ಶ್ರೀಯುತ ಪುನೀತ್ ಆಚಾರ್ಯ ಅವರು ಅಂತಿಮ ಬಿ.ಎಸ್ಸಿ. ಮತ್ತು ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ 4.0 ಅಡಿಯಲ್ಲಿ ಜಾವಾ ಕೋರ್ಸಿನ ಬಗ್ಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಬರುವ ವಿವಿಧ ಉದ್ಯೋಗಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಅವರು ಇಂತಹ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಡಾ. ಎಚ್.ಕೆ. ವೆಂಕಟೇಶ ಸ್ವಾಗತಿಸಿದರು, ಶ್ರೀ ಉಮೇಶ್ ಪೈ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ